Home ನಮ್ಮ ಕರಾವಳಿ ಬಿಜೆಪಿ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗಿ

ಬಿಜೆಪಿ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗಿ

ಮೈಸೂರು: ಇಲ್ಲಿನ ಕೆ.ಆರ್.ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕವು ವಿದ್ಯಾರಣ್ಯಾಪುರಂ ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ಮೋದಿ ಯುಗ್ ಉತ್ಸವ್‌ನಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗಿಯಾಗಿದ್ದಾರೆ.

- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಜತೆ ವೇದಿಕೆ ಹಂಚಿಕೊಂಡಿದ್ದಾರೆ. ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀವತ್ಸ ಅವರನ್ನು ಪಕ್ಕಕ್ಕೆ ಸರಿಸಿ ಅವರ ಆಸನದಲ್ಲಿ ಸಾ.ರಾ.ಮಹೇಶ್ ಕುಳಿತರು.

- Advertisement -

ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜು ಅವರೊಂದಿಗೆ ಕುಳಿತ ಸಾ.ರಾ.ಮಹೇಶ್ ಅವರು ಕೇಸರಿ ಶಾಲನ್ನು ಬಿಜೆಪಿ ಕಾರ್ಯಕರ್ತರಂತೆ ತನ್ನ ಹೆಗಲಿಗೆ ಹಾಕಿಕೊಳ್ಳುವ ಮೂಲಕ ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದ್ದಾರೆ.

- Advertisement -
- Advertisment -

Most Popular