ಶಾರ್ಜ: ಇಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಪ್ಲೇ ಆಫ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ತಂಡವು 4 ವಿಕೆಟ್ ಗಳ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳ ಗುರಿಯನ್ನು ನೀಡಿತು. ಆರಂಭದಲ್ಲಿ ಉತ್ತಮ ರೀತಿಯಲ್ಲಿ ಬ್ಯಾಟಿಂಗ್ ನಡೆಸಿದ ಬೆಂಗಳೂರು ತಂಡ ನಂತರ ಕೊಲ್ಕತ್ತಾದ ಬೌಲಿಂಗ್ ಗೆ ಬೇಗನೆ ವಿಕೆಟ್ ಒಪ್ಪಿಸುವುದರೊಂದಿಗೆ ಕಳಪೆ ಮಟ್ಟದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ವಿರಾಟ್ ಕೊಹ್ಲಿ (39) ದೇವದತ್ ಪಡಿಕ್ಕಲ್ (21) ತಂಡದ ಅಗ್ರ ಸ್ಕೋರರ್ ಎನಿಸಿಕೊಂಡರೆ, ಉಳಿದ ಆಟಗಾರರು ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಎಡವಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 139 ಗಳಿಸಿ 4 ವಿಕೆಟ್ ಗಳ ಜಯ ಸಾಧಿಸಿತು. ಸುನಿಲ್ ನರೈನ್(26) ವೆಂಕಟೇಶ್ ಅಯ್ಯರ್ (26) ಶುಬ್ಮಾನ್ ಗಿಲ್ (29) ನಿತೀಶ್ ರಾಣಾ(23) ಶಾಕಿಬ್ ಹಸನ್ (9*) ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.
ಕೊಲ್ಕತ್ತಾ ನೈಟ್ ರೈಡರ್ಸ್ ಪರ ಉತ್ತಮ ಬೌಲಿಂಗ್ ಪ್ರದರ್ಶನ ನಡೆಸಿದ ಸುನಿಲ್ ನರೈನ್ 4 ಮತ್ತು ಲೋಕಿ ಫರ್ಗ್ಯುಸನ್ 2 ಪಡೆದು ಗೆಲುವಿನ ಪ್ರದಾನ ಪಾತ್ರ ವಹಿಸಿದರು.