Home ನಮ್ಮ ರಾಜ್ಯ ಬೈಕ್ ಸ್ಕಿಡ್ ಆಗಿ ಅಪಘಾತ: ಇಬ್ಬರು ದುರ್ಮರಣ

ಬೈಕ್ ಸ್ಕಿಡ್ ಆಗಿ ಅಪಘಾತ: ಇಬ್ಬರು ದುರ್ಮರಣ

ರಾಯಚೂರು: ದಸರಾ ಹಬ್ಬದಂದೇ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ.

- Advertisement -

ಮೃತರನ್ನು ದೀಪಕ್ (22), ಹುಸೇನ್ (23) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು ನಗರದ ತಿಮ್ಮಾಪೂರ ಪೇಟೆ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ತಮ್ಮ ಸಹೋದರನನ್ನು ಬೈಕ್‌ನಲ್ಲಿ ಕರೆದುಕೊಂಡು ಬರಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಯರಗೇರಾ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಮೃತದೇಹಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ‌ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisment -

Most Popular