Home ನಮ್ಮ ರಾಜ್ಯ ಕೊರೋನ ಸೋಂಕಿತನನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಗೆ ಬೆಂಕಿ:ಇಬ್ಬರ ಸ್ಥಿತಿ ಚಿಂತಾಜನಕ

ಕೊರೋನ ಸೋಂಕಿತನನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಗೆ ಬೆಂಕಿ:ಇಬ್ಬರ ಸ್ಥಿತಿ ಚಿಂತಾಜನಕ

ಬೆಂಗಳೂರು: ಕೊರೊನಾ ಸೋಂಕಿತನನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಗೆ ಬೆಂಕಿ ಹೊತ್ತಿಕೊಂಡು ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತುಮಕೂರು-ನೆಲಮಂಗಲ ಹೆದ್ದಾರಿಯಲ್ಲಿ ನಡೆದಿದೆ.

- Advertisement -

ನೆಲಮಂಗಲ ತಾಲೂಕು ಎಡೆಹಳ್ಳಿ ಬಳಿ ಅಪರಿಚಿತ ವಾಹನ ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಆಂಬುಲೆನ್ಸ್ ಹೊತ್ತಿ ಉರಿದಿದೆ. ಡಿಕ್ಕಿ ಹೊಡೆದ ವ್ಯಕ್ತಿ ಪರಾರಿಯಾಗಿದ್ದಾನೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನತ್ತ ಕೋವಿಡ್ ಸೋಂಕಿತನನ್ನು ಅಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಅಪಘಾತದಲ್ಲಿ ಗಾಯಗೊಂಡವರನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisment -

Most Popular