Home ರಾಷ್ಟ್ರೀಯ ಸಾವರ್ಕರ್ ಇದ್ದ ಜೈಲಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ ಅಮಿತ್ ಶಾ

ಸಾವರ್ಕರ್ ಇದ್ದ ಜೈಲಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ ಅಮಿತ್ ಶಾ

ದೆಹಲಿ: ಮೂರು ದಿನಗಳ ಭೇಟಿಗಾಗಿ ಶುಕ್ರವಾರ ಮಧ್ಯಾಹ್ನ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ತಲುಪಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಂಡಮಾನ್ ನಲ್ಲಿ ಸಾವರ್ಕರ್ ಇದ್ದ ಸೆಲ್ಯುಲರ್ ಜೈಲಿಗೆ ಭೇಟಿ ನೀಡಿ ಸಾವರ್ಕರ್‌ಗೆ ಗೌರವ ನಮನ ಸಲ್ಲಿಸಿದ್ದಾರೆ.

- Advertisement -

ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿರುವ ಶಾ ದ್ವೀಪಸಮೂಹದಲ್ಲಿನ ವಿವಿಧ ಅಭಿವೃದ್ಧಿ ಉಪಕ್ರಮಗಳ ಬಗ್ಗೆ ಗಮನಹರಿಸಲಿದ್ದಾರೆ. ಅವರು ಸಾವರ್ಕರ್ ಇದ್ದ ಜೈಲಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ ನಂತರ ಅವರು ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

- Advertisement -

ಕೇಂದ್ರಾಡಳಿತ ಪ್ರದೇಶದಲ್ಲಿ ಶಹೀದ್ ದ್ವೀಪ್ ಪರಿಸರ ಪ್ರವಾಸೋದ್ಯಮ ಯೋಜನೆ ಮತ್ತು ಸ್ವರಾಜ್ ದ್ವಿಪ್ ವಾಟರ್ ಏರೋಡ್ರೋಮ್ ಸೇರಿದಂತೆ ವಿವಿಧ ಅಭಿವೃದ್ಧಿ ಉಪಕ್ರಮಗಳ ವೈಮಾನಿಕ ಸಮೀಕ್ಷೆಯನ್ನು ಸಹ ಶಾ ಕೈಗೊಳ್ಳಲಿದ್ದಾರೆ. ಆನಂತರ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪಕ್ಕೆ ಭೇಟಿ ನೀಡಲಿದ್ದಾರೆ.

- Advertisement -
- Advertisment -

Most Popular