Home ಕ್ರೈಂ ಸುದ್ದಿ ನೇಣು ಬಿಗಿದ ಸ್ಥಿತಿಯಲ್ಲಿ ‘ಮಹಿಳಾ ಸಬ್ ಇನ್ ಸ್ಪೆಕ್ಟರ್’ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ‘ಮಹಿಳಾ ಸಬ್ ಇನ್ ಸ್ಪೆಕ್ಟರ್’ ಮೃತದೇಹ ಪತ್ತೆ

ಲಕ್ನೋ : 2015ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದಂತ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿನ 30 ವರ್ಷದ ಮಹಿಳಾ ಸಬ್ ಇನ್ ಸ್ಪೆಕ್ಟರ್ ಒಬ್ಬರ ಶವ ಪತ್ತೆಯಾಗಿದೆ.

- Advertisement -

ಉತ್ತರ ಪ್ರದೇಶದ ಅನೂಪ್ ನಗರದ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಬ್ ಇನ್ ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಆರ್ಜೂ ಪವಾರ್(30) ಎಂಬುವರೇ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವುದು. ಇವರು 2015ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು.

- Advertisement -

ಅನೂಪ್ ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಇವರು, ಶಾಮಿಲಿ ಜಿಲ್ಲೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಬೆಳಿಗ್ಗೆ ಅವರ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಇರುವುದನ್ನು ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

- Advertisement -

ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿದಾಗ ಡೆತ್ ನೋಟ್ ಕೂಡ ದೊರೆತಿದೆ ಎನ್ನಲಾಗಿದೆ. ಅದರಲ್ಲಿ ಏನ್ ಬರೆದಿದೆ ಎಂಬುದನ್ನು ಬಹಿರಂಗ ಪಡಿಸಿಲ್ಲ.

- Advertisment -

Most Popular