Home ಅಂತಾರಾಷ್ಟ್ರೀಯ ಅಮೆರಿಕ ಮಾಜಿ ಅಧ್ಯಕ್ಷ ಬಿಲ್‌ ಕ್ಲಿಂಟನ್‌ ಆಸ್ಪತ್ರೆಗೆ ದಾಖಲು

ಅಮೆರಿಕ ಮಾಜಿ ಅಧ್ಯಕ್ಷ ಬಿಲ್‌ ಕ್ಲಿಂಟನ್‌ ಆಸ್ಪತ್ರೆಗೆ ದಾಖಲು

ವಾಷಿಂಗ್ಟನ್‌: ಅಮೆರಿಕ ಮಾಜಿ ಅಧ್ಯಕ್ಷ ಬಿಲ್‌ ಕ್ಲಿಂಟನ್‌ ಅವರು ಅನಾರೋಗ್ಯದ ಕಾರಣ ದಕ್ಷಿಣ ಕ್ಯಾಲಿಫೋರ್ನಿಯಾದ ಇರ್ವಿನ್‌ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

‘ಗುರುವಾರ ಸಂಜೆ ಕ್ಲಿಂಟನ್‌ ಅವರು ಯುಸಿಐ ವೈದ್ಯಕೀಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು, ದಾದಿಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದಗಳು’ ಎಂದು ಕ್ಲಿಂಟನ್‌ ಅವರ ವಕ್ತಾರ ಏಂಜೆಲ್‌ ಉರೆನಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

- Advertisement -

75 ವರ್ಷದ ಕ್ಲಿಂಟನ್‌ ಅವರು ಕೋವಿಡ್‌-19 ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿಲ್ಲ ಎಂಬುದನ್ನು ಹೊರತು ಪಡಿಸಿ ಬೇರೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕ್ಲಿಂಟನ್‌ ಅವರು ಅಮೆರಿಕದ 42ನೇ ಅಧ್ಯಕ್ಷರಾಗಿ 1993 ರಿಂದ 2001ರ ವರೆಗೆ ಕಾರ್ಯನಿರ್ವಹಿಸಿದ್ದರು.

- Advertisement -
- Advertisment -

Most Popular