Home ನಮ್ಮ ರಾಜ್ಯ ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ, ಪ್ರತಿಕ್ರಿಯೆ ಆಗುತ್ತದೆ:ಮಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ, ಪ್ರತಿಕ್ರಿಯೆ ಆಗುತ್ತದೆ:
ಮಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

ಮಂಗಳೂರು: ಸಮಾಜದಲ್ಲಿ ಹಲವಾರು ಭಾವನೆಗಳು ಇದ್ದು, ಅವುಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ ಮತ್ತು ಪ್ರತಿಕ್ರಿಯೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

- Advertisement -

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಮುಖ್ಯಮಂತ್ರಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

- Advertisement -

‘ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ’ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಸಮಾಜದಲ್ಲಿ ನಾವೆಲ್ಲ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ, ಇದು ಬಹಳ ಸೂಕ್ಷ್ಮವಾಗಿರುವ ವಿಚಾರ. ಸಮಾಜದಲ್ಲಿ ಹಲವಾರು ಭಾವನೆಗಳು ಇದ್ದು, ಅವುಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ ಮತ್ತು ಪ್ರತಿಕ್ರಿಯೆ ಆಗುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

‘ಕಾನೂನು ಸುವ್ಯವಸ್ಥೆ ಜೊತೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರಕಾರದ ಕರ್ತವ್ಯ. ಯುವಕರು ಸಹ ಸಾಮಾಜಿಕ ಭಾವನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕುವುದಕ್ಕೆ ಆಗುವುದಿಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ನಮ್ಮ ನೈತಿಕತೆ ಮೇಲೆ ಇದೆ. ಇಲ್ಲಿ ಪ್ರತಿಯೊಬ್ಬರದ್ದು ಹೊಣೆಗಾರಿಕೆ ಇದೆ’ ಎಂದರು.

- Advertisment -

Most Popular