Home ನಮ್ಮ ಕರಾವಳಿ ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಕಠಿಣ ಕಾನೂನು: ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಕಠಿಣ ಕಾನೂನು: ಸಿಎಂ ಬಸವರಾಜ ಬೊಮ್ಮಾಯಿ

ಉಡುಪಿ: ರಾಜ್ಯದಲ್ಲಿ ಮತಾಂತರ ನಿಷೇಧ ಮಾಡಲು ಕಠಿಣ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

- Advertisement -

ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನೂತನ ವಿಜ್ಞಾನ ಸಮುಚ್ಚಯ ಮತ್ತು ಪೂರ್ಣ ಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಗಣಕ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಮತಾಂತರವನ್ನು ನಿಷೇಧಿಸುವ ಕಾಯ್ದೆ ಜಾರಿಗೆ ತರುತ್ತೇವೆ.

- Advertisement -

ಅದಕ್ಕಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಗಳನ್ನು ಅಧ್ಯಯನ ಮಾಡುತ್ತಿದ್ದು, ಶೀಘ್ರದಲ್ಲೇ ನಮ್ಮ ರಾಜ್ಯದಲ್ಲಿ ಸೂಕ್ತ ಕಾಯ್ದೆ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ.

- Advertisement -

ಕರಾವಳಿಯಲ್ಲಿ ಗೋಹತ್ಯೆ ಘಟನೆಗಳು ಹೆಚ್ಚುತ್ತಿದ್ದು, ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಇದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

- Advertisment -

Most Popular