Home ನಮ್ಮ ರಾಜ್ಯ ಶಾಲೆಗಳಲ್ಲಿಯೇ ಮಕ್ಕಳಿಗೆ ಕೊರೋನ ಲಸಿಕೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಶಾಲೆಗಳಲ್ಲಿಯೇ ಮಕ್ಕಳಿಗೆ ಕೊರೋನ ಲಸಿಕೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಶಾಲಾ ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಶಾಲೆಗಳಲ್ಲಿಯೇ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

- Advertisement -

ರಾಜ್ಯದಲ್ಲಿ 6 ರಿಂದ 12ನೇ ತರಗತಿ ಆರಂಭಗೊಳಿಸಲಾಗಿದ್ದು, ಇದೀಗ ಅಕ್ಟೋಬರ್ 21ರಿಂದ ಬಾಕಿ ಉಳಿದಂತ 1 ರಿಂದ 5ನೇ ತರಗತಿಗಳನ್ನು ಆರಂಭಿಸೋದಕ್ಕಾಗಿ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಇದರ ನಡುವೆ ಶಾಲಾ ಮಕ್ಕಳಿಗೆ ಕೊರೋನಾ ಲಸಿಕೆಯನ್ನು ಶಾಲೆಗಳಲ್ಲಿಯೇ ನೀಡಲಾಗುತ್ತದೆ ಎಂದು ಶಿಕ್ಷಣ ನಾಗೇಶ್ ತಿಳಿಸಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆಗಳ ಆರಂಭ ಕುರಿತು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ತಜ್ಞರು ಹಾಗೂ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಪ್ರಕಟಿಸಲಾಗುತ್ತದೆ” ಎಂದರು.

- Advertisement -

ಇನ್ನು ರಾಜ್ಯದಲ್ಲಿ ಎಲ್ಲಾ ಶಾಲೆಗಳು ಆರಂಭಗೊಂಡ ಬಳಿಕ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಪುನರಾರಂಭಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

- Advertisment -

Most Popular