Home ಶಿಕ್ಷಣ ರಾಜ್ಯದಲ್ಲಿ ಜುಲೈ 1 ರಿಂದ ತರಗತಿಗಳು ಆರಂಭ : ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ ಜುಲೈ 1 ರಿಂದ ತರಗತಿಗಳು ಆರಂಭ : ಸಚಿವ ಸುರೇಶ್ ಕುಮಾರ್

ಚಾಮರಾಜನಗರ : ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ಆನ್ ಲೈನ್ ಮತ್ತು ದೂರದರ್ಶನದಿಂದಷ್ಟೇ ಪಾಠ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ನೇರ ತರಗತಿ ಆರಂಭವಿಲ್ಲ. ಆನ್ ಲೈನ್ ಹಾಗೂ ದೂರದರ್ಶನದ ಮೂಲಕ ಶಿಕ್ಷಣ ನೀಡಲಾಗುವುದು.

- Advertisement -

ಸರ್ಕಾರದ ಮಾರ್ಗಸೂಚಿ ಪಡೆದು ಶಾಲೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚು ಹೆಚ್ಚು ಮಕ್ಕಳು ಸೇರುತ್ತಿದ್ದಾರೆ.ಕಳೆದ ವರ್ಷ ಒಂದೂವರೆ ಲಕ್ಷದಷ್ಟು ಮಕ್ಕಳು ಸರ್ಕಾರಿ ಶಾಲೆಗೆ ಸೇರಿದ್ದು, ಈ ಬಾರಿಯೂ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗೆ ಸೇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

- Advertisement -
- Advertisment -

Most Popular