Home ತಂತ್ರಜ್ಞಾನ ಫೇಸ್‌ಬುಕ್, ವಾಟ್ಸ್‌ಆ್ಯಪ್‌ಗೆ ಸಿಸಿಐ ನೀಡಿರುವ ನೋಟಿಸ್‌ಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ

ಫೇಸ್‌ಬುಕ್, ವಾಟ್ಸ್‌ಆ್ಯಪ್‌ಗೆ ಸಿಸಿಐ ನೀಡಿರುವ ನೋಟಿಸ್‌ಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ

ನವದೆಹಲಿ: ಹೊಸ ಖಾಸಗಿ ನೀತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಗಾಗಿ ತ್ವರಿತ ಮೆಸೇಜಿಂಗ್ ಅಪ್ಲಿಕೇಷನ್‌ ಕುರಿತು ಕೆಲವು ಮಾಹಿತಿ ಒದಗಿಸಲು ಭಾರತದ ಸ್ಪರ್ಧಾ ಆಯೋಗವು (ಸಿಸಿಐ) ಫೇಸ್‌ಬುಕ್ ಮತ್ತು ವಾಟ್ಸ್‌ಆಪ್‌ಗೆ ನೀಡಿರುವ ನೋಟಿಸ್‌ಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಅನುಪ್ ಜೈರಾಮ್‌ ಭಂಭಾನಿ ಮತ್ತು ಜಸ್ಮೀತ್‌ ಸಿಂಗ್‌ ಅವರನ್ನೊಳಗೊಂಡ ರಜಾಕಾಲದ ಪೀಠವು ಸಿಸಿಐ ನೀಡಿರುವ ನೋಟಿಸ್‌ಗೆ ತಡೆ ನೀಡಲು ನಿರಾಕರಿಸಿದೆ. ಜುಲೈ 9ಕ್ಕೆ ಈ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿದೆ.

- Advertisement -
- Advertisment -

Most Popular