Home ತಂತ್ರಜ್ಞಾನ ಕನ್ನಡಿಗರಲ್ಲಿ ಕನ್ನಡದಲ್ಲೇ ಕ್ಷಮೆಯಾಚಿಸಿದ ಗೂಗಲ್

ಕನ್ನಡಿಗರಲ್ಲಿ ಕನ್ನಡದಲ್ಲೇ ಕ್ಷಮೆಯಾಚಿಸಿದ ಗೂಗಲ್

ದೆಹಲಿ: ಗೂಗಲ್ನಲ್ಲಿ ಭಾರತದಲ್ಲೇ ಅತ್ಯಂತ ಕೊಳಕು ಭಾಷೆ ಯಾವುದು ಎಂದು ಹುಡುಕಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಆ ಮೂಲಕ ಕನ್ನಡ ಭಾಷೆಗೆ, ಕನ್ನಡಿಗರಿಗೆ ಅವಮಾನ ಎಸಗುವ ಹುನ್ನಾರವೊಂದು ನಡೆದಿತ್ತು. ಈ ಕುರಿತು ಸಾಕಷ್ಟು ಚರ್ಚೆ ನಡೆದಿತ್ತು. ಮಾತ್ರವಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಯಾನವೇ ನಡೆದಿತ್ತು. ಗೂಗಲ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದಾದ ಬೆನ್ನಲ್ಲೇ ಗೂಗಲ್ ಇದೀಗ ಕನ್ನಡದಲ್ಲೇ ಕನ್ನಡಿಗರ ಕ್ಷಮೆಯಾಚಿಸಿದೆ.

- Advertisement -



ಈ ಕುರಿತು ಟ್ವೀಟ್ ಮಾಡಿರುವ ಗೂಗಲ್, ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ ಇಂಟರ್‍ನೆಟ್ ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶಗಳು ಆಶ್ಚರ್ಯವನ್ನುಂಟು ಮಾಡುತ್ತವೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು. ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ನಾವು ಕ್ಷಿಪ್ರವಾಗಿ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತೇವೆ. ನಮ್ಮ ಅಲ್ಗೊರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲವಾಗಿರುವುದನ್ನು ಮುಂದುವರಿಸಿದ್ದೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆಯಾಚಿಸುತ್ತೇವೆ ಎಂದು ಹೇಳಿದೆ.

- Advertisement -



ಅಗ್ಲಿ ಲಾಂಗ್ವೇಜ್ ಆಫ್ ಇಂಡಿಯಾ ಎಂದು ಸರ್ಚ್ ಮಾಡಿದಾಗ ವೆಬ್‍ಸೈಟ್ ಒಂದು ಕನ್ನಡ ಎಂಬ ಫಲಿತಾಂಶ ತೋರಿಸುತ್ತಿದ್ದ ಕುರಿತು ಸಾಕಷ್ಟು ಚರ್ಚೆ ನಡೆದಿತ್ತು. ಬಳಿಕ ವೆಬ್‍ಸೈಟ್ ಪೇಜ್ ಅನ್ನು ಗೂಗಲ್ ತನ್ನ ಸರ್ಚ್‍ನಿಂದಲೇ ತೆಗೆದು ಹಾಕಿತ್ತು.

www.debtconsolidationsquad.com ವೆಬ್‍ಸೈಟ್‍ Which is the ugliest language in india ಪ್ರಶ್ನೆಗೆ ಕನ್ನಡ ಉತ್ತರವನ್ನು ನೀಡಿತ್ತು. ಈ ಪುಟದಲ್ಲಿರುವ ಮಾಹಿತಿ ಗೂಗಲ್ ಸರ್ಚ್‍ನಲ್ಲಿ ಕಾಣುತ್ತಿತ್ತು. ಗೂಗಲ್ ಸರ್ಚ್‍ನಲ್ಲಿ ಈ ಮಾಹಿತಿ ಕಾಣುತ್ತಿದ್ದಂತೆ ಇಂದು ಭಾರೀ ಸಂಖ್ಯೆಯಲ್ಲಿ ಕನ್ನಡಿಗರು ರಿಪೋರ್ಟ್ ಮಾಡಲು ಆರಂಭಿಸಿದರು. ಜನರ ರಿಪೋರ್ಟ್ ಗಮನಿಸಿದ ಗೂಗಲ್ ಸರ್ಚ್ ಈಗ ಆ ಉತ್ತರ ಪ್ರದರ್ಶನವಾಗುತ್ತಿದ್ದ ಪುಟವನ್ನೇ ಸರ್ಚ್‍ನಿಂದ ತೆಗೆದು ಹಾಕಿದೆ.

- Advertisement -
- Advertisment -

Most Popular