Home ತಂತ್ರಜ್ಞಾನ ಉಡಾವಣೆಗೊಂಡ ಜಿಎಸ್ಎಲ್ವಿ- ಎಫ್ 10 ರಾಕೆಟ್ ನಲ್ಲಿ ತಾಂತ್ರಿಕ ದೋಷ: ಉಪಗ್ರಹವನ್ನು ನಿಗದಿತ ಜಾಗಕ್ಕೆ ಸೇರಿಸಲು...

ಉಡಾವಣೆಗೊಂಡ ಜಿಎಸ್ಎಲ್ವಿ- ಎಫ್ 10 ರಾಕೆಟ್ ನಲ್ಲಿ ತಾಂತ್ರಿಕ ದೋಷ: ಉಪಗ್ರಹವನ್ನು ನಿಗದಿತ ಜಾಗಕ್ಕೆ ಸೇರಿಸಲು ವಿಫಲ

ಬೆಂಗಳೂರು: ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆಗೊಂಡ ಜಿಎಸ್ಎಲ್ವಿ- ಎಫ್ 10 ರಾಕೆಟ್ ತಾಂತ್ರಿಕ ಕಾರಣದಿಂದ ತನ್ನೊಳಗಿದ್ದ ಉಪಗ್ರಹವನ್ನು ನಿಗದಿತ ಜಾಗಕ್ಕೆ ಸೇರಿಸಲು ವಿಫಲವಾಗಿದೆ.

- Advertisement -

EOS-3 ಎಂಬ ಭೂ ವೀಕ್ಷಣಾ ಸೆಟಲೈಟನ್ನು ಹೊತ್ತೊಯ್ದಿದ್ದ ರಾಕೆಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

- Advertisement -

EOS-3 ಸೆಟಲೈಟ್ ನ್ನು ಜಿಯೋಸಿಂಕ್ರೋನಸ್ ಟ್ರಾನ್ಸ್‌ಫರ್ ಆರ್ಬಿಟ್‌ನಲ್ಲಿ ಇರಿಸಲು 51.70 ಮೀಟರ್ ಎತ್ತರದ ಜಿಎಸ್ಎಲ್ವಿ-ಎಫ್10 ರಾಕೆಟ್ನಲ್ಲಿ ಯಶಸ್ವಿಯಾಗಿ ಮುಂಜಾನೆ 5.43ಕ್ಕೆ ಉಡಾವಣೆ ಮಾಡಲಾಗಿತ್ತು.

- Advertisement -

ಲಿಫ್ಟ್-ಆಫ್‌ಗೆ ಮುಂಚಿತವಾಗಿ, ಲಾಂಚ್ ಆಥರೈಸೇಶನ್ ಬೋರ್ಡ್ ಯೋಜಿಸಿದಂತೆ ಸಾಮಾನ್ಯ ಲಿಫ್ಟ್-ಆಫ್‌ಗಾಗಿ ಡೆಕ್‌ಗಳನ್ನು ತೆರವುಗೊಳಿಸಿತು. ಮೊದಲ ಮತ್ತು ಎರಡನೇ ಹಂತಗಳಲ್ಲಿ ರಾಕೆಟ್ನ ಕಾರ್ಯಕ್ಷಮತೆ ಸಾಮಾನ್ಯವಾಗಿತ್ತು.

ಆದರೆ ಕೆಲವು ನಿಮಿಷಗಳ ನಂತರ ರಾಕೆಟ್ನಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು ಕಂಡು ಬಂದಿತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

- Advertisment -

Most Popular