Home ಕ್ರೀಡೆ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 6 ವಿಕೆಟ್ ಗಳ ಜಯ

ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 6 ವಿಕೆಟ್ ಗಳ ಜಯ

ಅಬುಧಾಬಿ: ಇಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ 42 ನೇ ಪಂದ್ಯದಲ್ಲಿ‌ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 6 ವಿಕೆಟ್ ಗಳ ಗಳ ಗೆಲುವು ಸಾಧಿಸಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 135 ರನ್ ಗಳ ಗುರಿಯನ್ನು ನೀಡಿತು. ಮರ್ಕ್ರಮ್ (42) ದೀಪಕ್ ಹೂಡ (28) ಕೆ. ಎಲ್ ರಾಹುಲ್ (21) ಅಗ್ರ ಸ್ಕೋರರ್ ಎನಿಸಿಕೊಂಡರು. ಉಳಿದ ಆಟಗಾರರ ಕಳಪೆ ಬ್ಯಾಟಿಂಗ್ ಪ್ರದರ್ಶನ ಕಡಿಮೆ ರನ್ ಗಳಿಸುವಲ್ಲಿ ಶಕ್ತವಾಯಿತು.

- Advertisement -

ಪಂಜಾಬ್ ಕಿಂಗ್ಸ್ ನೀಡಿದ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು 19 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 137 ತನ್ ಗಳಿಸಿ 6 ವಿಕೆಟ್ ಗಳ ಗೆಲುವು ಸಾಧಿಸಿತು. ಕ್ವಿಂಟನ್ ಡಿ ಕಾಕ್ (27) ಸೌರಭ್ ತಿವಾರಿ (45) ಹಾರ್ದಿಕ್ ಪಾಂಡ್ಯ (40*) ಪೊಲಾರ್ಡ್ (15*) ತಂಡದ ಅಗ್ರ ಸ್ಕೋರರ್ ಎನಿಸಿಕೊಂಡು ಉತ್ತಮ ಬ್ಯಾಟಿಂಗ್ ಪ್ರದರ್ಶನ ನಡೆಸಿದರು.

- Advertisement -

ಮುಂಬೈ ಇಂಡಿಯನ್ಸ್ ನ ಉತ್ತಮ ಬೌಲಿಂಗ್ ಪ್ರದರ್ಶನ ನಡೆಸಿದ ಜಸ್ಪ್ರೀತ್ ಬುಮ್ರ 2, ಪೊಲಾರ್ಡ್ 2, ಕೃನಾಲ್ ಪಾಂಡ್ಯ ಮತ್ತು ರಾಹುಲ್ ಚಾಹರ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

- Advertisment -

Most Popular