Home ಕ್ರೀಡೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆ ವಿಕೆಟ್ 7 ಗಳ ಜಯ

ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆ ವಿಕೆಟ್ 7 ಗಳ ಜಯ

ದುಬೈ: ಇಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ 43 ನೇ ಪಂದ್ಯದಲ್ಲಿ‌ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡವು 7 ವಿಕೆಟ್ ಗಳ ಗೆಲುವು ಸಾಧಿಸಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 149 ರನ್ ಗಳ ಗುರಿಯನ್ನು ನೀಡಿತು. ಆರಂಭಿಕ ಆಟಗಾರರಾದ ಎವಿನ್ ಲೆವಿಸ್ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್ ಜೊತೆಯಾಟಕ್ಕೆ 77 ರನ್ ಗಳ ಉತ್ತಮ ಇನ್ನಿಂಗ್ಸ್ ಆರಂಬಿಸಿದರೂ, ನಂತರ ಬಂದ ಆಟಗಾರರು ಕಳಪೆ ಮಟ್ಟದ ಪ್ರದರ್ಶನ ನೀಡಿದರು. ಎವಿನ್ ಲೆವಿಸ್‌ (58) ಯಶಸ್ವಿ ಜೈಸ್ವಾಲ್ (31) ಸಂಜು ಸ್ಯಾಮ್ ಸನ್ (19) ಅಗ್ರ ಸ್ಕೋರರ್ ಎನಿಸಿಕೊಂಡರು.

- Advertisement -

ರಾಜಸ್ಥಾನ್ ರಾಯಲ್ಸ್ ನೀಡಿದ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 17.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ 7 ವಿಕೆಟ್ ಗಳ ಗೆಲುವು ಸಾಧಿಸಿತು. ಶಿಕರ್ ಭರತ್ (44) ಗ್ಲೆನ್ ಮ್ಯಾಕ್ಸ್‌ವೆಲ್ ( 50*) ವಿರಾಟ್ ಕೊಹ್ಲಿ (25) ದೇವದತ್ ಪಡಿಕ್ಕಲ್ (22) ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿನ ಹಾದಿ ಸುಗಮಗೊಳಿಸಿದರು.

- Advertisement -

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಉತ್ತಮ ಬೌಲಿಂಗ್ ಪ್ರದರ್ಶನ ನಡೆಸಿದ ಹರ್ಷಲ್ ಪಟೇಲ್ 3, ಯಜುವೇಂದ್ರ ಚಾಹಲ್ 2, ಶಹಬಾಝ್ ಅಹ್ಮದ್ 2, ಜೋರ್ಜ್ ಗರ್ಟೋನ್ ಮತ್ತು ಡೇನಿಯಲ್ ಕ್ರಿಸ್ಚಿಯನ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

- Advertisment -

Most Popular