Home ಕ್ರೀಡೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 6 ವಿಕೆಟ್ ಗಳ ಜಯ

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 6 ವಿಕೆಟ್ ಗಳ ಜಯ

ಶಾರ್ಜ: ಇಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ 44 ನೇ ಪಂದ್ಯದಲ್ಲಿ‌ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 6 ವಿಕೆಟ್ ಗಳ ಗೆಲುವು ಸಾಧಿಸಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಸನ್ ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ಗಳ ಕಡಿಮೆ ರನ್ನಿನ ಗುರಿಯನ್ನು ನೀಡಿತು. ಸಹಾ (44) ಅಬ್ದುಲ್ ಸಮದ್ (18) ರಶೀದ್ ಖಾನ್ (17*) ಅಗ್ರ ಸ್ಕೋರರ್ ಎನಿಸಿಕೊಂಡರೆ, ಉಳಿದಂತೆ ಆಟಗಾರರ ಬ್ಯಾಟಿಂಗ್ ಕಳಪೆ ಪ್ರದರ್ಶನವು ತಂಡದ ಸೋಲಿಗೆ ಕಾರಣವಾಯಿತು.

- Advertisement -

ಸನ್ ರೈಸರ್ಸ್ ಹೈದರಾಬಾದ್ ನೀಡಿದ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 139 ಗಳಿಸಿ 6 ವಿಕೆಟ್ ಗಳ ಸುಲಭ ಜಯಗಳಿಸಿತು. ಚೆನ್ನೈ ಸೂಪರ್ ಕಿಂಗ್ಸ್ ನ ರುತುರಾಜ್ ಗೈಕ್ವಾಡ್ (45) ಫಾಫ್ ಡು ಪ್ಲೆಸಿಸ್ (41) ಅಂಬಾಟಿ ರಾಯ್ಡು (17*) ಎಮ್.ಎಸ್ ಧೋನಿ (14*) ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.

- Advertisement -

ಚೆನ್ನೈ ಸೂಪರ್ ಕಿಂಗ್ಸ್ ನ ಉತ್ತಮ ಬೌಲಿಂಗ್ ಪ್ರದರ್ಶನ ನಡೆಸಿದ ಜೋಶ್ ಹೇಝಲ್ ವುಡ್ 3, ಡಿ ಜೆ ಬ್ರಾವೋ 2, ಶಾರ್ದೂಲ್ ಠಾಕೂರ್ ಮತ್ತು ರವೀಂದ್ರ ಜಡೇಜ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

- Advertisment -

Most Popular