Home ಕ್ರೀಡೆ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆ 6 ರನ್ ಗಳ ಗೆಲುವು

ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆ 6 ರನ್ ಗಳ ಗೆಲುವು

ಶಾರ್ಜ: ಇಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ 48 ನೇ ಪಂದ್ಯದಲ್ಲಿ‌ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 6 ರನ್ ಗಳ ಗೆಲುವು ಸಾಧಿಸಿದೆ.

- Advertisement -

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 165 ರನ್ ಗಳ ಗುರಿಯನ್ನು ನೀಡಿತು. ಗ್ಲೆನ್ ಮ್ಯಾಕ್ಸ್ ವೆಲ್ (57) ದೇವದತ್ ಪಡಿಕ್ಕಲ್(40) ವಿರಾಟ್ ಕೊಹ್ಲಿ (25) ಎ ಬಿ ಡಿ ವಿಲಿಯರ್ಸ್ (23) ರನ್ ಗಳ ಬ್ಯಾಟಿಂಗ್ ಪ್ರದರ್ಶನ ನಡೆಸಿ ಅಗ್ರ ಸ್ಕೋರರ್ ಎನಿಸಿಕೊಂಡರು.

- Advertisement -

ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡವು 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ಗಳಿಸಿ 6 ರನ್ ಗಳ ಸೋಲನ್ನು ಒಪ್ಪಿಕೊಂಡಿತು. ಪಂಜಾಬ್ ಕಿಂಗ್ಸ್ ನ ಆರಂಭಿಕ ಆಟಗಾರರಾದ ಕೆ ಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಮೊದಲ ವಿಕೆಟ್ ಗಳಿಗೆ 91 ರನ್ ಉತ್ತಮ ಆರಂಭ ನೀಡಿದರು, ನಂತರ ಬಂದ ಆಟಗಾರರ ಕಳಪೆ ಮಟ್ಟದ ಬ್ಯಾಟಿಂಗ್ ಪ್ರದರ್ಶನದಿಂದ ಸೋಲಪ್ಪಬೇಕಾಯಿತು. ಮಯಾಂಕ್ ಅಗರ್ವಾಲ್ (57) ಕೆ ಎಲ್ ರಾಹುಲ್ (39) ಮರ್ಕ್ರಮ್ (20) ಅಗ್ರ ಸ್ಕೋರರ್ ಎನಿಸಿಕೊಂಡರು.

- Advertisement -

ರಾಯಲ್ ಚಾಲೆಂಜರ್ಸ್ ಬೆಂಗಳೂರು ನ ಉತ್ತಮ ಬೌಲಿಂಗ್ ಪ್ರದರ್ಶನ ನಡೆಸಿದ ಯಜುವೇಂದ್ರ ಚಾಹಲ್ 3, ಜೋರ್ಜ್ ಗರ್ಟೋನ್ ಮತ್ತು ಶಹಬಾಝ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

- Advertisment -

Most Popular