Home ಕ್ರೀಡೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆ 3 ವಿಕೆಟ್ ಗಳ ಜಯ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆ 3 ವಿಕೆಟ್ ಗಳ ಜಯ

ಶಾರ್ಜ: ಇಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಪ್ಲೇ ಆಫ್ ಪಂದ್ಯದಲ್ಲಿ‌ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊಲ್ಕತ್ತಾ ನೈಟ್ ತಂಡವು 3 ವಿಕೆಟ್ ಗಳ ಗೆಲುವು ಸಾಧಿಸಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳ ಗುರಿಯನ್ನು ನೀಡಿತು. ಕಳಪೆ ಮಟ್ಟದ ಬ್ಯಾಟಿಂಗ್ ಪ್ರದರ್ಶನದಿಂದ ಕಡಿಮೆ ಗಳಿಸುವಲ್ಲಿ ತಂಡ ಶಕ್ತವಾಯಿತು. ಶಿಕರ್ ಧವನ್ (36) ಶ್ರೇಯಸ್ ಅಯ್ಯರ್(30*) ತಂಡದ ಅಗ್ರ ಸ್ಕೋರರ್ ಎನಿಸಿಕೊಂಡರೆ, ಉಳಿದ ಆಟಗಾರರು ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಎಡವಿದರು.

- Advertisement -

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.5 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ಗಳಿಸಿ 3 ವಿಕೆಟ್ ಗಳ ಜಯ ಸಾಧಿಸಿತು. ಆರಂಭಿಕ ಬ್ಯಾಟ್ಸ್‌ಮನ್ ಗಳಾದ ಶುಭ್ಮಾನ್ ಗಿಲ್ ಮತ್ತು ವೆಂಕಟೇಶ್ ಅಯ್ಯರ್ ಮೊದಲ ವಿಕೆಟ್ ಗೆ 96 ರನ್ ಸೇರಿಸುವುದರ ಮೂಲಕ ಜಯದ ಹಾದಿ ಸುಗಮಗೊಳಿಸಿದರು. ವೆಂಕಟೇಶ್ ಅಯ್ಯರ್ (55) ಶುಬ್ಮಾನ್ ಗಿಲ್ (46) ನಿತೀಶ್ ರಾಣಾ(13) ರಾಹುಲ್ ತ್ರಿಪಾಠಿ (12) ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.

- Advertisement -

ಕೊಲ್ಕತ್ತಾ ನೈಟ್ ರೈಡರ್ಸ್ ಪರ ಉತ್ತಮ ಬೌಲಿಂಗ್ ಪ್ರದರ್ಶನ ನಡೆಸಿದ ವರುನ್ ಚಕ್ರವರ್ತಿ2 ಮತ್ತು ಲೋಕಿ ಫರ್ಗ್ಯುಸನ್, ಶಿವಂ ಮಾವಿ ತಲಾ 1 ವಿಕೆಟ್ ಪಡೆದು ಮಿಂಚಿದರು.

- Advertisment -

Most Popular