Home ಕಾನೂನು ಮಾಹಿತಿ ವರದಕ್ಷಿಣೆ ಕಿರುಕುಳ ಪ್ರಕರಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಮಧ್ಯಂತರ ಜಾಮೀನು.

ವರದಕ್ಷಿಣೆ ಕಿರುಕುಳ ಪ್ರಕರಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಮಧ್ಯಂತರ ಜಾಮೀನು.

ಪುತ್ತೂರು: ದ ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ನಿವಾಸಿ ಅಬ್ದುಲ್ ಜಲೀಲ್ ಎಂಬಾತನ ವಿರುದ್ದ ಆತನ ಪತ್ನಿ ನೀಡಿದ ದೂರಿನಂತೆ ಪುತ್ತೂರಿನ ಮಹಿಳಾ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿಗೆ ಜಾಮೀನು ಮಂಜೂರಾಗಿದೆ..

- Advertisement -

ಪುತ್ತೂರಿನ ಮಹಿಳಾ ಠಾಣೆ ಪೋಲಿಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

- Advertisement -

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ಜಲೀಲ್ ಸ್ವದೇಶಕ್ಕೆ ಹಿಂತಿರುಗಿ ಬರುವಾಗ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ ಮಹಿಳಾ ಠಾಣೆ ಪೋಲಿಸರು ಪುತ್ತೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯೆದುರು ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸುವಂತೆ ಕೋರಿದ್ದರು.

- Advertisement -

ನ್ಯಾಯಲಯದಲ್ಲಿ ಆರೋಪಿ ಪರ ವಕೀಲರು ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ರಿ ಜಾಮೀನು ಅರ್ಜಿಗೆ ಸಹಾಯಕ ಸರಕಾರಿ ಅಭಿಯೋಜಕರು ತೀವ್ರ ಆಕ್ಷೇಪಣೆ ಸಲ್ಲಿಸಿದ್ದರು. ಅಂತಿಮವಾಗಿ ಆರೋಪಿ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯಾದ ಅರುಣ್ ಕುಮಾರ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿ ಮುಖ್ಯ ಜಾಮೀನು ಅರ್ಜಿಯ ವಿಚಾರಣೆಯನ್ನು ಅಗಸ್ಟ್ 23ಕ್ಕೆ ಮುಂದೂಡಿದರು. ಆರೋಪಿಯ ಪರವಾಗಿ ನ್ಯಾಯವಾದಿಗಳಾದ ಕೆ. ಎಂ. ಸಿದ್ದಿಕ್ ಮತ್ತು ಇಬ್ರಾಹಿಂ ಬಾತಿಷಾ ಯು. ಕೆ. ವಾದಿಸಿದ್ದರು.

- Advertisment -

Most Popular