Home ಮನೋರಂಜನೆ ಮುಂದಿನ ಬಾರಿ ರಾಷ್ಟ್ರವಾದಿ, ಆರೆಸ್ಸೆಸ್ ಹಿನ್ನೆಲೆಯುಳ್ಳವರು ಸಿಎಂ ಆಗ್ತಾರೆ: ಕೆ.ಎಸ್. ಈಶ್ವರಪ್ಪ

ಮುಂದಿನ ಬಾರಿ ರಾಷ್ಟ್ರವಾದಿ, ಆರೆಸ್ಸೆಸ್ ಹಿನ್ನೆಲೆಯುಳ್ಳವರು ಸಿಎಂ ಆಗ್ತಾರೆ: ಕೆ.ಎಸ್. ಈಶ್ವರಪ್ಪ

ಮೈಸೂರು: ಮುಂದಿನ ಬಾರಿ ರಾಷ್ಟ್ರವಾದಿ, ಆರೆಸ್ಸೆಸ್ ಹಿನ್ನೆಲೆಯುಳ್ಳವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲ ಎಂಬಂತೆ ಬಿಂಬಿಸಲಾಗಿತ್ತು. ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ ಎಂದರು.

- Advertisement -

ಮುಂದೆ ಜಾತಿ ಲೆಕ್ಕಾಚಾರವಿಲ್ಲ, ಈವರೆಗೆ ಬಿಜೆಪಿಗೆ ಸಂಪೂರ್ಣ ಬಹುಮತ ಬಂದಿಲ್ಲ. ಹೊರಗಿನವರ ಸಹಕಾರ ಪಡೆದುಕೊಂಡು ಸರ್ಕಾರ ರಚನೆ ಮಾಡಿದ್ದೇವೆ. ಮುಂದಿನ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತೆ. ಆಗ ಜಾತಿ ವಿಚಾರ ಬರುವುದಿಲ್ಲ. ರಾಷ್ಟ್ರವಾದಿಯನ್ನು ಆರೆಸ್ಸೆಸ್ ಹಿನ್ನೆಲೆಯುಳ್ಳವರು ಬಿಜೆಪಿ ಮುಖ್ಯಮಂತ್ರಿ ಮಾಡುತ್ತದೆ ಎಂದು ಈಶ್ವರಪ್ಪ ಹೇಳಿದರು.

- Advertisement -
- Advertisment -

Most Popular