Home ರಾಷ್ಟ್ರೀಯ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ ಆಸ್ಪತ್ರೆಗೆ ದಾಖಲು

ನವದೆಹಲಿ: ಶ್ವಾಸಕೋಶ ಸೋಂಕು, ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ಮುಖ್ಯಸ್ಥ, ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ದಾಖಲು ಮಾಡಲಾಗಿದೆ.

- Advertisement -

ಲಾಲೂ ಪ್ರಸಾದ್ ಯಾದವ್ ಅವರನ್ನು ಶುಕ್ರವಾರ ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಏರ್ಲಿಫ್ಟ್ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪತ್ನಿ, ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಸಿಎಂ ತೇಜಶ್ವಿ ಯಾದವ್, ಸೇರಿದಂತೆ ಹಲವು ನಾಯಕರು ಆಸ್ಪತ್ರೆಗೆ ಭೇಟಿನೀಡಿದ್ದಾರೆ.

- Advertisement -

ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ.

- Advertisement -
- Advertisment -

Most Popular