Home ನಮ್ಮ ಕರಾವಳಿ ದ.ಕ ಜಿಲ್ಲೆ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ: ಸಿ.ಎಂ ಯಡಿಯೂರಪ್ಪ ಘೋಷಣೆ

ದ.ಕ ಜಿಲ್ಲೆ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ: ಸಿ.ಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದೆ. ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲಾಗುತ್ತಿದೆ. ಜೊತೆಗೆ ಶೇ.50ರಷ್ಟು ಪ್ರಯಾಣಿಕರೊಂದಿಗೆ ಸಾರಿಗೆ ಸಂಚಾರ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ಸಹ ಶೇ.50ರಷ್ಟು ಜನರೊಂದಿಗೆ ತೆರೆಯೋದಕ್ಕೂ ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

- Advertisement -

ಈ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವ್ ದರ ಇದೆ.

- Advertisement -

13 ಜಿಲ್ಲೆಗಳಲ್ಲಿ 5-10 ಇದೆ. ಮೈಸೂರು ಜಿಲ್ಲೆಯಲ್ಲಿ 10ಕ್ಕಿಂತ ಹೆಚ್ಚು ಇದೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಭಂಧಗಳ ಸಡಿಲಿಕೆಯ ಆಧಾರ ಮೇಲೆ, ಶೇ.5ಕ್ಕಿಂತ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಸೇರಿದಂತೆ ಗದಗ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ, ಈ ಕೆಳಕಂಡಂತೆ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ.

- Advertisement -

ಎಲ್ಲಾ ಅಂಗಡಿಗಳನ್ನು ಬೆಳಿಗ್ಗೆಯಿಂದ ಸಂಜೆ 5 ಗಂಟೆಯವರೆಗೆ ತೆರೆಯೋದಕ್ಕೆ ಅವಕಾಶನೀಡಲಾಗಿದೆ. ಎಸಿ ಚಾಲನೆಗೊಳಿಸದೇ ಹೋಟೆಲ್, ಕ್ಲಬ್, ರೆಸ್ಟೋರೆಂಟ್ ಗಳಲ್ಲಿ ಮಧ್ಯಪಾನಹೊರತುಪಡಿಸಿ ಸಂಜೆ 5 ಗಂಟೆಯವರೆಗೆ ಶೇ.50ರಷ್ಟು ಜನರಿಗೆ ಅವಕಾಶ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ. ಬಸ್ ಮತ್ತು ಮೆಟ್ರೋಗೆ ಶೇ.50ರಷ್ಟು ಜನರೊಂದಿಗೆ ಕಾರ್ಯಾಚರಣೆಗೆ ಅವಕಾಶ. ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.50ರಷ್ಟು ನೌಕರರೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಲಾಡ್ಜ್, ರೆಸಾರ್ಟ್ ಶೇ.50ರಷ್ಟು ಜನರೊಂದಿಗೆ ಅವಕಾಶ. ಜಿಮ್ ಗಳಲ್ಲಿ ಹವಾನಿಯಂತ್ರಣ ಇಲ್ಲದೇ ಅವಕಾಶ. ಶೇ.5ಕ್ಕಿಂತ ಹೆಚ್ಚು ಇರುವಂತ 13 ಜಿಲ್ಲೆಗಳಾದಂತ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ದಾವಣಗೆರೆ, ಧಾರವಾಡ, ಕೊಡಗು ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 11-06-2021ರ ಆದೇಶವೇ ಮುಂದುವರೆಯಲಿದೆ ಎಂದು ತಿಳಿಸಿದರು.

ದ.ಕ ಜಿಲ್ಲೆ ಸೇರಿ 13 ಜಿಲ್ಲೆಗಳಲ್ಲಿ ಈ ಸಡಿಲಿಕೆ ಮಾತ್ರ ಸೋಮವಾರದಿಂದ ಅನ್ವಯ

• ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.

• ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

• ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.

• ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

• ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.

• ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

• ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿAದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿAದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

- Advertisment -

Most Popular