Home ರಾಷ್ಟ್ರೀಯ ರಾಹುಲ್ ಗಾಂಧಿ ಯನ್ನು ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು:ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆ...

ರಾಹುಲ್ ಗಾಂಧಿ ಯನ್ನು ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು:
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆ ಹಿಂಪಡೆಯಲು ತೀರ್ಮಾನ

ಹೊಸದಿಲ್ಲಿ: ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಶುಕ್ರವಾರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆ ಹಿಂಪಡೆಯಲು ಮತ್ತು ತಮ್ಮ ಕರ್ತವ್ಯಗಳನ್ನು ಮುಂದುವರಿಸಲು ಒಪ್ಪಿಕೊಂಡಿದ್ದಾರೆ.

- Advertisement -

ರಾಷ್ಟ್ರ ರಾಜಧಾನಿಯಲ್ಲಿ ರಾಹುಲ್ ಗಾಂಧಿ ಮತ್ತು ಪಂಜಾಬಿನ ನಾಯಕರೊಂದಿಗಿನ ಭೇಟಿಯ ನಂತರ ಸಿಧು, ಎಲ್ಲವನ್ನೂ ಸರಿಪಡಿಸಲಾಗಿದೆ ಹೇಳಿದರು. ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಕೂಡ ಸಭೆಯಲ್ಲಿ ಹಾಜರಿದ್ದರು.

- Advertisement -

‘ಸಿಧು ತಮ್ಮ ಕಳವಳವನ್ನು ರಾಹುಲ್ ಗಾಂಧಿ ಬಳಿ ಹೇಳಿಕೊಂಡಿದ್ದಾರೆ. ಅದನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ. ರಾಜೀನಾಮೆ ಹಿಂಪಡೆದು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುವುದಾಗಿ ಸಿಧು ತಿಳಿಸಿದ್ದಾರೆ’ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

- Advertisement -
- Advertisment -

Most Popular