Home ಕ್ರೈಂ ಸುದ್ದಿ ಪಂಪ್‌ವೆಲ್‌ ಲಾಡ್ಜ್‌ನಲ್ಲಿ ಯುವಕನ ಕೊಲೆ ಪ್ರಕರಣ:ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದ ಕಂಕನಾಡಿ ಪೊಲೀಸರು

ಪಂಪ್‌ವೆಲ್‌ ಲಾಡ್ಜ್‌ನಲ್ಲಿ ಯುವಕನ ಕೊಲೆ ಪ್ರಕರಣ:
ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದ ಕಂಕನಾಡಿ ಪೊಲೀಸರು

ಮಂಗಳೂರು: ನಗರದ ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಯುವಕನೊಬ್ಬನ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಸುರತ್ಕಲ್ ನಿವಾಸಿ ಜೇಸನ್ (25) ವಶಕ್ಕೆ ಪಡೆದ ಆರೋಪಿ. ಅ.15 ರಂದು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್,ಪ್ರಜ್ವಲ್ ಎಂಬವರು ತೆರಳಿದ್ದರು. ಸಮಯ ಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಎಂಬುವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಸುರತ್ಕಲ್ ಎಂಬಾತನು ತನ್ನಲ್ಲಿರುವ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿದ್ದಾನೆ ಎನ್ನಲಾಗಿದೆ.

- Advertisement -

ಇದರಿಂದ ಧನುಷ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿದ್ದ ಎಂದು ದೂರಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಜೇಸನ್ ಸೇರಿದಂತೆ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದರು. ಇನ್ನೊಬ್ಬ ಆರೋಪಿಗೆ ಶೋಧ ಮುಂದುವರಿದಿದೆ.

- Advertisement -
- Advertisment -

Most Popular