Home ಕ್ರೈಂ ಸುದ್ದಿ ರೈತ ಮುಖಂಡರ ಮೇಲೆ ಎಫ್ ಐ ಆರ್ ದಾಖಲು: ಸಿಖ್ ಧ್ವಜ ಹಾರಿಸಿದ ದೀಪ್ ಸಿಧು...

ರೈತ ಮುಖಂಡರ ಮೇಲೆ ಎಫ್ ಐ ಆರ್ ದಾಖಲು: ಸಿಖ್ ಧ್ವಜ ಹಾರಿಸಿದ ದೀಪ್ ಸಿಧು ಹೆಸರು ಕೈ ಬಿಟ್ಟ ಪೊಲೀಸರು

ದೆಹಲಿ: ನೇಗಿಲಯೋಗಿಯ ಹೋರಾಟದಲ್ಲಿ ನಡೆದ ಗದ್ದಲದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಸುಮಾರು 200 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಸರಿಯಾದ ಪರಿಶೀಲನೆ ನಡೆಸಿದ ನಂತರ ಬಂಧನಗಳನ್ನು ಮಾಡುತ್ತಿದ್ದೇವೆ ಮತ್ತು ಈವರೆಗೆ 22 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಅಷ್ಟೇ ಅಲ್ಲದೆ, ದೆಹಲಿ ಪೊಲೀಸರು ರೈತ ಹೋರಾಟದ ಮುಂಚೂಣಿಯಲ್ಲಿರುವ, ದರ್ಶನ್ ಪಾಲ್, ರಾಜೀಂದರ್‌ ಸಿಂಗ್, ಬಲ್‌‌ಬೀರ್‌ ಸಿಂಗ್ ರಾಜೇವಾಲ್, ಬೂಟಾ ಸಿಂಗ್ ಬುರ್ಜ್‌ಗಿಲ್, ಜೋಗೀಂದರ್‌ ಸಿಂಗ್‌, ರಾಕೇಶ್ ಟಿಕಾಯತ್‌, ಯೋಗೇಂದ್ರ ಯಾದವ್ ಸೇರಿದಂತೆ ಒಂಬತ್ತು ರೈತ ಮುಖಂಡರ ಹೆಸರನ್ನು ನಮೂದಿಸಿ ಎಫ್ಐಆರ್ ದಾಖಲಿಸಿದ್ದಾರೆ. ಆದರೆ ಕೆಂಪು ಕೋಟೆಯಲ್ಲಿ ಧ್ವಜ ಹಾರಿಸುವಾಗ ಅಲ್ಲೇ ಇದ್ದ ದೀಪ್ ಸಿಧು ಅವರ ಮೇಲೆ ಯಾವುದೆ ಎಫ್‌ಐಆರ್‌ ದಾಖಲಾಗಿಲ್ಲ.

- Advertisement -

ಘಟನೆಯಲ್ಲಿ 300 ಪೊಲೀಸರು ಗಾಯಗೊಂಡಿದ್ದಾರೆ, ಸಂಘರ್ಷದಲ್ಲಿ ಭಾಗಿಯಾಗಿರುವ ರೈತರನ್ನು ಗುರುತಿಸಲು ಅನೇಕ ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

- Advertisement -

ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಭಾಗವಹಿಸಿದ ರೈತ ಗುಂಪೊಂದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಿದ್ದು, ಬ್ಯಾರಿಕೇಡ್‌ಗಳನ್ನು ಮುರಿದು ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದ್ದರು. ಪೊಲೀಸರು ಕೂಡಾ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್ ಮಾಡಿದ್ದರು.

- Advertisment -

Most Popular