Home ಶಿಕ್ಷಣ ಸೆಪ್ಟೆಂಬರ್ 6 ರಿಂದ ಆರನೇ ತರಗತಿಯಿಂದ 8ನೇ ತರಗತಿಗಳು ಆರಂಭ:ಕಂದಾಯ ಸಚಿವ ಆರ್ ಅಶೋಕ್

ಸೆಪ್ಟೆಂಬರ್ 6 ರಿಂದ ಆರನೇ ತರಗತಿಯಿಂದ 8ನೇ ತರಗತಿಗಳು ಆರಂಭ:ಕಂದಾಯ ಸಚಿವ ಆರ್ ಅಶೋಕ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಶೇ.2ಕ್ಕಿಂತ ಕಡಿಮೆ ಇರುವಂತ ಪಾಸಿಟಿವಿಟಿ ದರ ಆಧರಿಸಿ, ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿ 6 ರಿಂದ 8ನೇ ತರಗತಿಗಳನ್ನು ಸೆಪ್ಟೆಂಬರ್ 6ರಿಂದ ಆರಂಭಿಸಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

- Advertisement -

ಈ ಕುರಿತಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದಂತ ತಾಂತ್ರಿಕ ತಜ್ಞರ ಸಭೆಯ ಬಳಿಕ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಕಂದಾಯ ಸಚಿವ ಆರ್.ಅಶೋಕ್ ಅವರು, ಶನಿವಾರ ಮತ್ತು ಭಾನುವಾರ ಹೊರತುಪಡಿಸಿ, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವಂತ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ರಿಂದ 6 ರಿಂದ 8ನೇ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದರು.

- Advertisement -

ಸೋಮವಾರದಿಂದ ಶುಕ್ರವಾರದವರೆಗೆ ಶಾಲೆಗಳನ್ನು ನಡೆಸಲಾಗುತ್ತದೆ. ಶನಿವಾರ ಮತ್ತು ಭಾನುವಾರ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕೇರಳದಿಂದ ಬರೋರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಶೇ.50ರಷ್ಟು ಮಕ್ಕಳು ಮಾತ್ರ ಶಾಲೆಗ ಹಾಜರಾಗಬೇಕು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವಂತ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸೋದಕ್ಕೆ ಅನುಮತಿ ಇಲ್ಲ ಎಂದರು.

- Advertisement -
- Advertisment -

Most Popular