Home ನಮ್ಮ ಕರಾವಳಿ ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಗಾಂಧಿನಗರ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ-ಚಾಲಕನಿಗೆ ಗಾಯ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಗಾಂಧಿನಗರ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ-ಚಾಲಕನಿಗೆ ಗಾಯ

ಸುಳ್ಯ ಗಾಂಧಿನಗರ ಬಳಿ ಮಡಿಕೇರಿ ಕಡೆಯಿಂದ ಬರುತ್ತಿದ್ದ ಕೆ ಎ 36 ಸೀರಿಯಲ್ ನಂಬರಿನ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ಸುಳ್ಯದಿಂದ ವರದಿಯಾಗಿದೆ.

- Advertisement -

ಇದರ ಪರಿಣಾಮ ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ಮುಖದ ಭಾಗಕ್ಕೆ ಗಾಯವಾಗಿದ್ದು ಸ್ಥಳೀಯರು ಸೇರಿ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ರುವುದಾಗಿ ತಿಳಿದು ಬಂದಿದೆ. ಕಾರು ಜಖಂಗೊಂಡಿದ್ದು ಸ್ಥಳಕ್ಕೆ ಪೋಲಿಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಅಲ್ಲೇ ಪಕ್ಕದಲ್ಲಿದ್ದ ವಿದ್ಯುತ್ ಕಂಬ ಮುರಿದಿದೆ. ಘಟನಾ ಸ್ಥಳದಲ್ಲಿದ್ದ ಬೇಕರಿ ಅಂಗಡಿಗೂ ಹಾನಿಯಾಗಿದ್ದು ಬೇಕರಿ ಸಾಮಾನುಗಳು ಚೆಲ್ಲಾಪಿಲ್ಲಿಯಾಗಿವೆ.

- Advertisement -

ಸ್ಥಳಕ್ಕೆ
ತಕ್ಷಣ ಮೆಸ್ಕಾಂ ಇಲಾಖೆಯವರು ಬಂದು ವಿದ್ಯುತ್ ಕಂಬ ದುರಸ್ತಿಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

- Advertisement -
- Advertisment -

Most Popular